ರಾಜ್ಯದಲ್ಲಿ ಅಕ್ಕಿ ಕೊರತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಜೊತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಭೆ

ಶುಕ್ರವಾರ, 15 ಸೆಪ್ಟಂಬರ್ 2023 (15:03 IST)
bjp
ಮಧ್ಯಾಹ್ನ ಬಿಸಿಯೂಟಕ್ಕೆ ಆಹಾರ ಕೊರತೆ ಹಿನ್ನೆಲೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಜೊತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಭೆ ನಡೆಸಿದ್ದಾರೆ.ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲಾಗ್ತಿದೆ.ಮಳೆ ಕೈಕೊಟ್ಟ ಹಿನ್ನೆಲೆ ಬರದ ಪರಿಸ್ಥಿತಿ ಇದೆ.ಅಕ್ಕಿ ದಾಸ್ತಾನು ಕೊರತೆಯಾಗಿದೆ.ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಬಿಸಿಯೂಟಕ್ಕೆ ಕೊರತೆಯಾಗುವ ಸಾಧ್ಯತೆ ಇದೆ.ಮುನ್ನೆಚ್ಚಾರಿಕಾ ಕ್ರಮವಾಗಿ ಸಭೆ ನಡೆಸಲು ಸಚಿವರು  ಮುಂದಾಗಿದ್ದಾರೆ.ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವ ವರೆಗೂ ಬಿಸಿಯೂಟಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ.ಬಿಸಿಯೂಟಕ್ಕೆ ಆಹಾರ ಪೂರೈಸುವಂತೆ ಸಚಿವ ಮುನಿಯಪ್ಪಗೆ  ಮಧುಬಂಗಾರಪ್ಪ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ