ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್ ಅಶೋಕ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದರು.
ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಸ್ಪತ್ರೆಯಲ್ಲಿ ದಾಖಲಾಗುವ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇನ್ನೂ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ನಿಯಂತ್ರಣಕ್ಕೆ ಮಾರ್ಗಸೂಚಿಯನ್ನು ತಿಳಿಸಿದೆ.
ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂದಿಂದ ಬಳಲುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ, ವೈದ್ಯರೊಂದಿಗೆ ಚರ್ಚೆ ನಡೆಸಿದರು. ಈ ಬಗ್ಗೆ ಸರ್ಕಾರ ಸರಿಯಾದ ರೀತಿಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಯನಗರ ಶಾಸಕರಾದ ಶ್ರೀ ಸಿ ಕೆ ರಾಮಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.