ಗ್ರಾ.ಪಂ ಚುನಾವಣೆ ಹಿನ್ನೆಲೆ ರಿಟ್ ಅರ್ಜಿ ಸ್ಲಲಿಕೆ: ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ

ಮಂಗಳವಾರ, 19 ಮೇ 2015 (18:05 IST)
ಗ್ರಾಮ ಪಂಚಾಯತ್ ಚುನಾವಣೆಗಾಗಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಸ್ಥಗಿತಗೊಳಿಸುವಂತೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಚುನಾವಣೆಗೆ ತಡೆ ನೀಡಲು ನಿರಾಕರಿಸಿದೆ. 
 
ಹೈಕೋರ್ಟ್ ನ ಏಕಸದಸ್ಯ ಪೀಠಕ್ಕೆ ಸಾರ್ವಜನಿಕರಿಂದ 60ಕ್ಕೂ ಹೆಚ್ಚು ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇಂದು ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು, ತಡೆ ನೀಡಲು ನಿರಾಕರಿಸಿದ್ದಾರೆ. ಅಲ್ಲದೆ ವಿಚಾರಣೆಗೂ ಮುನ್ನ ಸರ್ಕಾರಕ್ಕೆ ಅಭಿಪ್ರಾಯ ದಾಖಲಿಸುವಂತೆ ಸೂಚಿಸಿತ್ತು. ಇನ್ನು ಮೀಸಲಾತಿ ಹಾಗೂ ಪುನರ್ ವಿಂಗಡಣೆ ವಿಷಯದಲ್ಲಿ ವ್ಯತ್ಯಾಸಗಳಿದ್ದು, ಅವುಗಳನ್ನು ಸರಿಪಡಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. 
 
ಮೇ 29 ಮತ್ತು ಜೂನ್ 2ರಂದು ಎರಡು ಹಂತಗಳಲ್ಲಿ ರಾಜ್ಯಾದ್ಯಂತ ಚುನಾವಣೆ ನಡೆಯಲ್ಲಿದ್ದು, ಈಗಾಗಗಲೇ ಒಂದನೇ ಹಂತದಲ್ಲಿ ನಡೆಯುವ ಚುನಾವಣಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವೂ ಮುಗಿದಿದೆ.

ವೆಬ್ದುನಿಯಾವನ್ನು ಓದಿ