ಮತ್ತೆ ಸಂಕಷ್ಟದಲ್ಲಿ ರೋಹಿಣಿ ಸಿಂಧೂರಿ!?

ಗುರುವಾರ, 24 ಮಾರ್ಚ್ 2022 (07:36 IST)
ಮೈಸೂರು : ಐಎಎಸ್ ಅಧಿಕಾರಿ  ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
 
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿ ಆಗಿದ್ದ ಸಂದರ್ಭದಲ್ಲಿ ಕೇಳಿ ಬಂದಿದ್ದ ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕೂಡಲೇ ಪ್ರಕರಣದ ತನಿಖೆ ಮಾಡಿ ವರದಿ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರಿಗೆ ಪೌರಾಡಳಿತ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಚಿಲ್ಲರೆ ಮಾರುಕಟ್ಟೆಯಲ್ಲಿ 10-13 ರೂಪಾಯಿಗೆ ಸಿಗುವ ಬಟ್ಟೆ ಬ್ಯಾಗ್ಗೆ 52 ರೂಪಾಯಿ ಕೊಟ್ಟು ಖರೀದಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಕೂಡ ಪಡೆದಿಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದರು.

ಆದರೂ ಪಟ್ಟು ಬಿಡದ ಶಾಸಕ ಸಾ.ರಾ.ಮಹೇಶ್ ಅವರು ಬಟ್ಟೆ ಬ್ಯಾಗ್ ಅವ್ಯವಹಾರಗಳ ಬಗ್ಗೆ ಸದನದಲ್ಲಿ ಗಮನ ಸೆಳೆದಿದ್ದರು. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ