ಮತ್ತೆ ಪೋಸ್ಟ್ ಹಂಚಿಕೊಂಡ ರೂಪಾ!

ಬುಧವಾರ, 1 ಮಾರ್ಚ್ 2023 (11:04 IST)
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾತನಾಡಬಾರದು, ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ಮಾನಹಾನಿ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ರೂಪಾ ಮತ್ತೆ ಪೋಸ್ಟ್ ಹಾಕುವುದನ್ನು ಮುಂದುವರಿಸಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ದ ಸರ್ಕಾರದ ಕೆಲವು ಕ್ರಮಗಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು.  ಈ ಮಾಧ್ಯಮ ವರದಿಯ ಕೆಲವು ಪೋಸ್ಟ್ಗಳನ್ನು ತಮ್ಮ ಫೇಸ್ ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. 

ರೋಹಿಣಿ ಸಿಂಧೂರಿ ಅವರು ಡಿ. ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮಂಗಳವಾರ ಪತಿ ಸುಧೀರ್ ರೆಡ್ಡಿ ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ