ಇಂದು ಸುದ್ದಿಗೋಷ್ಠಿ ನಡೆಸಿ ಚುನಾವಣೆಗೆ ಸ್ಪರ್ಧಿಸುವ ಕುರಿತು ನಿರ್ಧಾರ ಕೈಗೊಳ್ಳಲಿರುವ ರೋಷನ್ ಬೇಗ್

ಭಾನುವಾರ, 17 ನವೆಂಬರ್ 2019 (10:33 IST)
ಬೆಂಗಳೂರು : ಅನರ್ಹ ಶಾಸಕ ರೋಷನ್ ಬೇಗ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಇಂದು ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣೆಗೆ ಸ್ಪರ್ಧಿಸುವ ಕುರಿತು ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ.ಐಎಂಎ ಹಗರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ಬಿಜೆಪಿಗೆ ಟಿಕೆಟ್ ಕೈತಪ್ಪಿತು. ಆದ ಕಾರಣ ಅವರ ಬೆಂಬಲಿಗರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ.


ಈ ಹಿನ್ನಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಿರುವ ರೋಷನ್ ಬೇಗ್ ಚುನಾವಣೆಗೆ ಸ್ಪರ್ಧಿಸುವ ಕುರಿತು ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಇನ್ನೊಂದು ಕಡೆ ರೋಷನ್ ಬೇಗ್ ಜೆಡಿಎಸ್ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ