ಬೆಂಗಳೂರು : ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ಅನರ್ಹ ಶಾಸಕ ರೋಷನ್ ಬೇಗ್ ನಿರ್ಧಾರ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ನ ತೀರ್ಪಿನ ಬಳಿಕ ಬಿಜೆಪಿಗೆ ಸೇರ್ಪಡೆಯಾಗಿ ಅಲ್ಲಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಿದ್ದ ರೋಷನ್ ಬೇಗ್ , ಐಎಂಎ ಹಗರಣದಲ್ಲಿ ಅವರ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ತಡೆಯೊಡ್ಡಿತ್ತು.
ಈ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾದ ರೋಷನ್ ಬೇಗ್ ಇದೀಗ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಫೇಸ್ ಬುಕ್ ನಲ್ಲಿ ಘೋಷಣೆ ಮಾಡಿದ್ದಾರೆ.