ಪ್ರೀತಿ ನಿರಾಕರಿಸಿದ್ದಕ್ಕೆ ಗಗನ ಸಖಿಯ ಕಿವಿ ಕಟ್ ಮಾಡಿದ ರೌಡಿ ಶೀಟರ್ ಅರೆಸ್ಟ್

ಶುಕ್ರವಾರ, 17 ಮೇ 2019 (12:33 IST)
ಬೆಂಗಳೂರು : ಪ್ರೀತಿ ನಿರಾಕರಿಸಿದ್ದಕ್ಕೆ ರೌಡಿ ಶೀಟರ್ ಯೊಬ್ಬ  ಗಗನ ಸಖಿಯ ಕಿವಿಯನ್ನು ಕಟ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.




ಅಜಯ್ ಅಲಿಯಾಸ್ ಜಾಕಿ ಹಲ್ಲೆ ಮಾಡಿದ ರೌಡಿ ಶೀಟರ್, ಈತ ಇಂಡಿಗೊ ಏರ್ ಲೈನ್ಸ್ ನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಯುವತಿಗೆ ಪ್ರಪೋಸ್ ಮಾಡಿದ್ದ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ್ದಾಳೆ. ಅಲ್ಲದೇ ಕಿರುಕುಳ ಕೊಡುತ್ತಿದ್ದ ರೌಡಿ ಅಜಯ್‍ ಗೆ ಮನೆಯವರಿಗೆ ತಿಳಿಸಿ ಎಚ್ಚರಿಕೆ ಕೊಡಿಸಿದ್ದಳು.


ಇದರಿಂದ ಕೋಪಗೊಂಡ ಆತ ಆಕೆಯ ಮನೆಯ ಮೇಲೆ ದಾಳಿ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಗಗನಸಖಿ ಪೊಲೀಸರಿಗೆ ದೂರು ನೀಡಿದ ಕಾರಣ ಪೊಲೀಸರು ಜಾಕಿಯನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದರು. ಇದರಿಂದ ಕೋಪಗೊಂಡ ಆತ ಕೆಲಸ ಮುಗಿಸಿ ಬರುತ್ತದ್ದ ಗಗನಸಖಿಯ ಮೇಲೆ ಹಲ್ಲೆ ಮಾಡಿ ಆಕೆಯ ಕಿವಿಗಳನ್ನು ಕತ್ತರಿಸಿ ಪರಾರಿಯಾಗಿದ್ದಾನೆ.


ಗಾಯಗೊಂಡಿರುವ ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು, ನಾಲ್ಕು ದಿನದಿಂದ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದು, ಇದೀಗ ಆತ ಪೊಲೀಸರ ಬಲೆಗೆ ಬಿದ್ದಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ