ಹಣಕಾಸು ವಿಚಾರದಲ್ಲಿ ಓರ್ವ ರೌಡಿಶೀಟರ್ ನಡು ರಸ್ತೆಯಲ್ಲೇ ಅಮಾಯಕ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗ ಳೂರಿನ ಅಟ್ಟೂರು ಲೇಔಟ್ನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್ ಶ್ರೀಕಾಂತ್, ಚರಣ್ರಾಜ್ ಮೇಲೆ ಹಲ್ಲೆ ಮಾಡಿದ್ದಾನೆ.
ಗೂಡ್ಸ್ ವಾಹನಕ್ಕೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ. ಆರೋಪಿ ಪರವಾಗಿ ಮತ್ತೊಬ್ಬ ರೌಡಿಶೀಟರ್ ಧಮ್ಕಿ ಹಾಕಿದ್ದಾನೆ. ಈ ಬಗ್ಗೆ ಚರಣ್ ಯಲಹಂಕ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ರೌಡಿಶೀಟರ್ ಗಳು ಎಸ್ಕೇಪ್ ಆಗಿದ್ದಾರೆ. ಅಲ್ಲದೇ ಕೇಸ್ ವಾಪಸ್ ತಗೊ ಎಂದು ರೌಡಿಶೀಟರ್ ಪ್ರವೀಣ್ ಧಮ್ಕಿ ಹಾಕಿದ್ದಾರೆ. ಈ ಸಂಬಂಧ ಹಲ್ಲೆಗೊಳಗಾದ ಚರಣ್ ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ ಘಟನೆ ನಡೆದು ಒಂದು ವಾರ ಕಳೆದರೂ ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಯಲಹಂಕ ನ್ಯೂಟೌನ್ ಪೊಲೀಸರ ನಿರ್ಲಕ್ಷ್ಯದಿಂದ ಏರಿಯಾದಲ್ಲೇ ಭಯದ ವಾತಾವರಣ ಸೃಷ್ಟಿಯಾಗಿದೆ.