ರೆಫರಿ ರೂಮ್ ನಲ್ಲಿ ಕೋಲ್ಡ್ ಬ್ಲಡೆಡ್ ಮರ್ಡರ್ :
ಉಪ ಪೊಲೀಸ್ ಆಯುಕ್ತ (ಕೇಂದ್ರ) ಅನುಚೇತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಸ್ಥಳೀಯ ಫುಟ್ಬಾಲ್ ತಂಡವನ್ನು ನಿರ್ವಹಿಸುತ್ತಿದ್ದ ರೌಡಿ ಶೀಟರ್ ಅರವಿಂದ ಕೆಎಸ್‌ಎಫ್‌ಎ ಫುಟ್‌ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಆಡಲು ಬಂದಿದ್ದರು. ಸಂಜೆ 4 ಗಂಟೆ ಸುಮಾರಿಗೆ 4 ರಿಂದ 5 ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದು ಅರವಿಂದ ನನ್ನು ಸುತ್ತುವರೆದಿದ್ದಾರೆ. ನಂತರ ಆತ ಸ್ಥಳದಿಂದ ಪರಾರಿಯಾಗಿ ಕೆಎಸ್‌ಎಫ್‌ಎ ಫುಟ್‌ಬಾಲ್ ಕ್ರೀಡಾಂಗಣವನ್ನು ಪ್ರವೇಶಿಸಿ ರೆಫರಿಯ ಕೊಠಡಿಯೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ. ಆದರೂ ಬಿಡದ ಆರೋಪಿಗಳು ಬಾಗಿಲು ಮುರಿದು ಮಾರಕ ಆಯುಧಗಳನ್ನು ಬಳಸಿ ಕೊಲೆ ಮಾಡಿದ್ದಾರೆ.
ಎಂದು ಮಾಹಿತಿ ನೀಡಿದರು.
ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ. ಕೊಲೆಗೆ ಗ್ಯಾಂಗ್ ಗಳ ಮದ್ಯ ಹಳೆಯ ವೈಷಮ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಅರವಿಂದ್ ರೌಡಿ ಶೀಟರ್ ಆಗಿದ್ದಾನೆ ಹಾಗೂ ಕೆಲ ದಿನಗಳ ಹಿಂದೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದ ಎಂದು ಕೇಂದ್ರ ವಿಭಾಗದ ಡಿ.ಸಿ.ಪಿ ಹೇಳಿದರು.
ಆಟಗಾರರು ಮತ್ತು ಪ್ರೇಕ್ಷಕರು ಅರವಿಂದರನ್ನು ಸಶಸ್ತ್ರ ಪುರುಷರು ಮೈದಾನದಲ್ಲಿ ಅಟ್ಟಿಸಿಕೊಂಡು ಹೋಗುವುದನ್ನು ನೋಡಿ ಆಘಾತಕ್ಕೆ ಒಳಗಿದ್ದಾರೆ. ಈ ಸಮಯದಲ್ಲಿರಾಜ್ಯ ಫುಟ್ ಬಾಲ್ ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿಯೇ ಡಿವಿಷನ್ ಫುಟ್ಬಾಲ್ ಪಂದ್ಯಾವಳಿ ನೆಡೆಯುತ್ತಿದ್ದು. ಪಂದ್ಯದ ಆರಂಭಕ್ಕೆ ಕೆಲವೇ ನಿಮಿಷದ ಆರಂಭಕ್ಕೋ ಕೆಲ ನಿಮಿಷಗಳ ಮೊದಲು ಮರ್ಡರ್ ನೆಡೆದಿದೆ ಎಂದು ಅನುಚೇತ್ ತಿಳಿಸಿದರು.