ಪ್ರತೀ ಬರ ಪೀಡಿತ ತಾಲ್ಲೂಕುಗಳಿಗೆ ಈವರಗೆ ತಲಾ ರೂ.1.65 ಕೋಟಿ ಒದಗಿಸಲಾಗಿದೆ, ಇದಲ್ಲದೆ 14ನೇ ಹಣಕಾಸು ಆಯೋಗದಿಂದ ಜಿಲ್ಲೆಗೆ 54ಕೋಟಿ ರೂಪಾಯಿ ಒದಗಿಸಲಾಗಿದೆ ಅದನ್ನುಸದ್ಬಳಕೆ ಮಾಡಿಕೊಂಡು ನೀರಿನ ಸಮಸ್ಯೆ ನಿಬಾಯಿಸಿ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಎ ಮಂಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಹಾಸನ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಕುಡಿಯುವ ನೀರು ಸರಬರಾಜು ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅಗತ್ಯ ಇರುವ ಕಡೆ ಲಭ್ಯ ಮೂಲಗಳಿಂದ ನೀರಿನ ಪೂರೈಕೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಹಾಸನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು.