ಕೆಎಸ್ ಆರ್ ಟಿಸಿ ಬಸ್ ನಲ್ಲಿ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಗಳ ಅಕ್ರಮ ಸಾಗಾಟ

ಶನಿವಾರ, 12 ಜನವರಿ 2019 (10:11 IST)
ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಯನ್ನು ನಗರದ  ಹೊಸಕೋಟೆ ಟೋಲ್ ಬಳಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.


ಬೆಂಗಳೂರು ವಿಜಯವಾಡ ಮಾರ್ಗದ ಕೆಎ 57 ಎಫ್ 2844 ಕೆಎಸ್ ಆರ್ ಟಿಸಿ ಬಸ್ ನಲ್ಲಿ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಬೆಂಗಳೂರು ಕೇಂದ್ರೀಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಟಿ.ಪ್ರಭಾಕರ ರೆಡ್ಡಿ, ವಿಭಾಗೀಯ ಭದ್ರತಾ ನಿರೀಕ್ಷಕಿ ಸಿ.ಕೆ.ರಮ್ಯಾಮತ್ತು ಸಂಚಾರ ನಿಯಂತ್ರಕ ಎಚ್‌.ಎಂ.ಚಲಪತಿ ನೇತೃತ್ವದ ತಂಡವು ಗುರುವಾರ ರಾತ್ರಿ 10.30ಕ್ಕೆ ಹೊಸಕೋಟೆ ಟೋಲ್‌ ಬಳಿ ತಪಾಸಣೆ ನಡೆಸಿದಾಗ ಬೆಳ್ಳಿ ದೀಪಗಳು ಪತ್ತೆಯಾಗಿವೆ.


ಕೆಎಸ್ ಆರ್ ಟಿಸಿ ನೀಡಿದ ಮಾಹಿತಿ ಆಧಾರದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಮಹಜರು ನಡೆಸಿ ಬೆಳ್ಳಿ ದೀಪಗಳನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ, ನಿರ್ವಾಹಕ ಈ ಅಕ್ರಮ ಸಾಗಣೆಯಲ್ಲಿ ಪಾಲ್ಗೊಂಡ ಹಿನ್ನಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ