ರೂ. 5.81ಕೋಟಿ ವೆಚ್ಚದಲ್ಲಿ ಪುಟ್ಟರಾಜ ಗವಾಯಿಗಳ ಸ್ಮಾರಕ

ಮಂಗಳವಾರ, 17 ಜನವರಿ 2017 (12:16 IST)
ಡಾ.ಪುಟ್ಟರಾಜ ಗವಾಯಿಗಳ ಸ್ಮಾರಕ ಭವನನಿರ್ಮಾಣ ಕಾಮಗಾರಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಸಚಿವರಾದ ಎಚ್.ಕೆ.ಪಾಟೀಲ ಗುದ್ದಲಿ ಪೂಜೆ ನೆರವೇರಿಸಿದರು. ಗದುಗಿನ ವೀರೇಶ್ವರ ಪುಣ್ಯಾಶ್ರಮದ ಬಳಿ ಕೆ.ಎಚ್.ಪಾಟೀಲ ಸಭಾಭವನದ ಎದುರಿನ ಬಯಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 5.81ಕೋಟಿ ವೆಚ್ಚದಲ್ಲಿ ಸ್ಮಾರಕ ಭವನ ನಿರ್ಮಾಣವಾಗಲಿದೆ.
 
ಕೇವಲ 8 ವರ್ಷದ ಬಾಲಕರಾಗಿದ್ದಾಗ ಸಂಗೀತ ಕಲಿಕೆಯ ವಿದ್ಯಾರ್ಥಿಯಾಗಿ ಆಶ್ರಮದ ಮಡಿಲಿಗೆ ಬಿದ್ದ ಪುಟ್ಟರಾಜ ಗವಾಯಿಗಳು ಗುರುಗಳ ಆಶೀರ್ವಾದ, ನಿಷ್ಠೆ-ವಿಶ್ವಾಸ, ಸ್ವತ್ಛಂದ ಮನಸ್ಸಿನೊಂದಿಗೆ ಆಶ್ರಮದ ಪೀಠಾಧಿಪತಿ ಸ್ಥಾನಕ್ಕೇರಿದರು. 
 
1944ರಲ್ಲಿ ವೀರೇಶ್ವರ ಪುಣ್ಯಾಶ್ರಮದ ಭಾರ ಹೊತ್ತ ಪುಟ್ಟರಾಜ ಗವಾಯಿ ಅವರು ತಮ್ಮ ವೈಯಕ್ತಿಕ ಬದುಕನ್ನು ಬದಿಗಿರಿಸಿ ಆಶ್ರಮದ ಅಭಿವೃದ್ಧಿ, ಅಂಧ-ಅನಾಥರ ಕಾಳಜಿಯಲ್ಲಿಯೇ ಶಿವನನ್ನು ಕಂಡರು. 'ಕಾಯಕವೇ ಕೈಲಾಸವಯ್ಯ' ಎಂಬ ಶರಣರ ವಾಣಿಯನ್ನು ಅಕ್ಷರಶಃ ಅನುಷ್ಠಾನಗೊಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ