ಕಾವೇರಿ ಗಲಭೆಗಳಿಗೆ ಆರ್‌ಎಸ್‌ಎಸ್ ಕಾರಣ: ಕಾಂಗ್ರೆಸ್

ಶುಕ್ರವಾರ, 16 ಸೆಪ್ಟಂಬರ್ 2016 (15:28 IST)
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಗಲಭೆಗಳಿಗೆ ಆರ್‌ಎಸ್‌ಎಸ್ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದ್ದಾರೆ. 
 
ಕಾವೇರಿ ಗಲಭೆಗೆ ಆರ್‌ಎಸ್‌ಎಸ್ ಕಾರಣ. ಈ ಕುರಿತು ತನಿಖೆ ನಡೆಸಿ ಸತ್ಯಾಸತ್ಯಗೆಗಳನ್ನು ಬಯಲಿಗೆಳೆಯಬೇಕು. ಇಲ್ಲದಿದ್ದರೇ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದರು. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಹಾಗೂ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ವಿರೋಧಿಸಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆದಿತ್ತು. 
 
ಕಾವೇರಿ ನೀರು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು,ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ