ಐಟಿ ಸೆಲ್ ಚುರುಕುಗೊಳಿಸಲು ರಾಜ್ಯ ಬಿಜೆಪಿಗೆ ಆರ್ ಎಸ್ಎಸ್ ನಿರ್ದೇಶನ
ಶುಕ್ರವಾರ, 22 ಜೂನ್ 2018 (11:30 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ತಯಾರಾಗುವ ನಿಟ್ಟಿನಲ್ಲಿ ಮತ್ತೆ ಸಾಮಾಜಿಕ ಜಾಲತಾಣಗಳು ಸೇರಿದಂತೆ ಐಟಿ ವಿಭಾಗ ಚುರುಕುಗೊಳಿಸಲು ಬಿಜೆಪಿ ನಾಯಕರಿಗೆ ಆರ್ ಎಸ್ಎಸ್ ಸೂಚನೆ ಕೊಟ್ಟಿದೆ.
ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಚಾಮರಾಜಪೇಟೆಯಲ್ಲಿರುವ ಆರ್ ಎಸ್ಎಸ್ ಕಚೇರಿಗೆ ಆಗಮಿಸಿ ನಾಯಕರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ಲೋಕಸಭೆಗೆ ಬೇಕಾದ ತಯಾರಿ, ಸಿದ್ಧತೆಗಳ ಬಗ್ಗೆ ಸಲಹೆ ಪಡೆದಿದ್ದಾರೆ.
ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ ಸೇರಿದಂತೆ ಘಟಾನುಘಟಿ ನಾಯಕರ ನಿಯೋಗ ಆರ್ ಎಸ್ಎಸ್ ನಾಯಕರನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಐಟಿ ವಿಭಾಗಕ್ಕೆ ಹೆಚ್ಚಿನ ಆದ್ಯತೆ ಕೊಡಲು ಸೂಚನೆ ಸಿಕ್ಕಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.