ಯಡಿಯೂರಪ್ಪ, ಈಶ್ವರಪ್ಪ ರಾಜಿ ಸಂಧಾನಕ್ಕೆ ಆರ್‌ಎಸ್‌ಎಸ್ ಎಂಟ್ರಿ!

ಶನಿವಾರ, 14 ಜನವರಿ 2017 (11:40 IST)
ರಾಜ್ಯ ಬಿಜೆಪಿ ಪಾಳಯದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಮುಂದಾಗಿರುವ ಆರ್‌ಎಸ್‌ಎಸ್, ಇದೇ 17ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವೆ ಸಂಧಾನ ನಡೆಸಿಲಿದೆ.
ಚಾಮರಾಜಪೇಟೆಯಲ್ಲಿರುವ ಆರ್‌ಎಸ್‌ಎಸ್ ಕಚೇರಿಯಲ್ಲಿಯಲ್ಲಿ ಸಂಧಾನ ನಡೆಯಲಿದ್ದು, ಉಭಯ ನಾಯಕರ ನಡುವೆ ಉಂಟಾಗಿರುವ ಕಲಹಕ್ಕೆ ಫುಲ್‌ಸ್ಟಾಪ್ ಇಡಲು ಮುಂದಾಗಿದ್ದಾರೆ. 
 
ಈಗಾಗಲೇ ಉಭಯ ನಾಯಕರ ಜೊತೆ ಚರ್ಚೆ ನಡೆಸಿರುವ ಆರ್‌ಎಸ್‌ಎಸ್ ನಾಯಕರು, ಸಭೆಗೆ ಬರಲು ಯಡಿಯೂರಪ್ಪ ಹಾಗೂ ಈಶ್ವರಪ್ಪ ಸಮ್ಮತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
 
ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ