ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಅಪರಿಚಿತ ಗುಂಪು
ಬುಧವಾರ, 5 ಜುಲೈ 2017 (15:18 IST)
ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಆರೆಸ್ಸೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ.
ಕಂದೂರು ನಿವಾಸಿಯಾದ ಶರತ್, ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಲಾಂಡ್ರಿ ವಹಿವಾಟು ನಡೆಸುತ್ತಿದ್ದ. ರಾತ್ರಿ ಅಂಗಡಿ ಮುಚ್ಚಿ ಮನೆಗೆ ಮರಳುತ್ತಿರುವಾಗ ಅಪರಿಚಿತ ವ್ಯಕ್ತಿಗಳ ಗುಂಪು ಹಲ್ಲೆ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೆಸ್ಸೆಸ್ ಕಾರ್ಯಕರ್ತರ ಶರತ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲಸ ತಾಲೂಕುಗಳಲ್ಲಿ ಕೋಮುಗಲಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 11 ರವರೆಗೆ ಕಲಂ 144 ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸೂಳ್ಯ ತಾಲೂಕುಗಳಲ್ಲಿ ಕರ್ಫ್ಯೂ ಹೇರಿದ್ದಲ್ಲದೇ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತನನ್ನು ಬಂಟ್ವಾಳ ತಾಲೂಕಿನ ಬೆಂಜನಪದವು ಬಳಿ ಜೂನ್ 21 ರಂದು ಹತ್ಯೆ ಮಾಡಲಾಗಿತ್ತು. ನಂತರ ಕೋಮು ಹಿಂಸಾಚಾರದ ಘಟನೆಗಳು ನಡೆದಿವೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.