ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವು: ಬಂಟ್ವಾಳ ಮತ್ತೆ ಉದ್ವಿಗ್ನ

ಶನಿವಾರ, 8 ಜುಲೈ 2017 (09:08 IST)
ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಶುಕ್ರರವಾರ ರಾತ್ರಿ ಸಾವನ್ನಪ್ಪಿದ್ದಾರೆ. ಇದರಿಂದ ಮತ್ತೆ ಬಂಟ್ವಾಳ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.


ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಶರತ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜೀವನ್ಮರಣ ಸ್ಥಿತಿಯಲ್ಲಿದ್ದ ಶರತ್ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಆರ್ ಎಸ್ಎಸ್ ಕಾರ್ಯಕರ್ತರು ನಿಷೇಧಾಜ್ಞೆಯನ್ನು ಲೆಕ್ಕಿಸದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಈ ನಡುವೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಸದ ನಳಿನ್ ಕುಮಾರ್ ಕಟೀಲ್ ರನ್ನು ಬಂಧಿಸಲಾಗಿತ್ತು. ದ. ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹಿಂಸಾತ್ಮಕ ಘಟನೆಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿರುವ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಆರೋಪಿಗಳು ಯಾರೇ ಆಗಿದ್ದರೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ.. ನಾರ್ಮಲ್ ಡೆಲಿವರಿ ಆಗಬೇಕಾದರೆ ಏನು ಮಾಡಬೇಕು?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ