ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ರೂಲ್ಸ್ ಬ್ರೇಕ್

ಬುಧವಾರ, 8 ಡಿಸೆಂಬರ್ 2021 (10:49 IST)
ಬೆಂಗಳೂರು : ನಗರದಲ್ಲಿ ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ. ಇದರ ನಡುವೆ ಜನ ಕೂಡ ಭಾರಿ ನಿರ್ಲಕ್ಷ್ಯ ತೋರುತ್ತಿದ್ದಾರೆ.
 ಮೆಜೆಸ್ಟಿಕ್ನ BMTC ಬಸ್ ನಿಲ್ದಾಣದಲ್ಲಿ ರೂಲ್ಸ್ ಬ್ರೇಕ್ ಆಗುತ್ತಿದೆ. ದೈಹಿಕ ಅಂತರವೂ ಇಲ್ಲ, ಮಾಸ್ಕ್ ಕೂಡ ಧರಿಸದೆ ಪ್ರಯಾಣಿಕರು ನಿರ್ಲಕ್ಷ್ಯವಾಗಿ ವರ್ತಿಸುತ್ತಿದ್ದಾರೆ. ಜೊತೆಗೆ ಬಿಎಂಟಿಸಿ ಚಾಲಕ, ನಿರ್ವಾಹಕರಿಂದಲೂ ನಿರ್ಲಕ್ಷ್ಯ ಕಂಡು ಬರುತ್ತಿದೆ.
ಪ್ರತಿನಿತ್ಯ ಸಾವಿರಾರು ಜನ ಓಡಾಡುವ ಕಡೆ ಈ ರೀತಿ ರೂಲ್ಸ್ ಬ್ರೇಕ್ ಹಾಕುತ್ತಿರುವುದು ಅಪಾಯಕ್ಕೆ ಸ್ವಾಗತ ಮಾಡಿದಂತೆ. ಇನ್ನು ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲೂ ಇದೇ ರೀತಿಯ ಪರಿಸ್ಥಿತಿ ಕಂಡು ಬಂದಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದೆ ನಿರ್ಲಕ್ಷ್ಯ ತೋರಲಾಗುತ್ತಿದೆ.
ಸದ್ಯ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡಲಾಗಿದ್ದು ಕೇರಳ, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಬಿಬಿಎಂಪಿ ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ