ಬಿಜೆಪಿಗೆ ಒಂದು ಕಾನೂನು ನಮಗೆ ಬೇರೆ ಕಾನೂನು

ಭಾನುವಾರ, 16 ಜನವರಿ 2022 (16:32 IST)
ಕಾಂಗ್ರೆಸ್ ಪಾದಯಾತ್ರೆ ವೇಳೆ ಅನೇಕ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಧೃಡ ಪಟ್ಟಿದೆ ಎಂಬ ಆರೋಪಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ.
ನಮ್ಮ ಕಾರ್ಯಕರ್ತರೇ ನಮಗೆ ಭದ್ರತೆಯನ್ನು ನೀಡಿದ್ದರು. ಆದರೆ ಬಿಜೆಪಿ ನಾಯಕರು ಸುಖಾಸುಮ್ಮನೆ ಸುಳ್ಳಿನ ವರದಿ ನೀಡಿ, ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಅವರಿಗೆ ಒಂದು ನ್ಯಾಯ ಬೇರೆಯವರಿಗೆ ಇನ್ನೊಂದು ನ್ಯಾಯ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ