ಜುಲೈ 16ರಂದೇ ‘ಗೃಹಲಕ್ಷ್ಮಿ’ಗೆ ಚಾಲನೆ?
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಸರ್ಕಾರ ಇಂದು ದಿನಾಂಕ ಘೋಷಿಸಲಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಜುಲೈ 16,17,18 ರಂದು ಪ್ರಿಯಾಂಕ ಗಾಂಧಿ ವಾದ್ರಾ ಮೂಲಕ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸರ್ಕಾರ ಯೋಜಿಸಿದೆ. 16,17,18 ರ ಪೈಕಿ ಒಂದು ದಿನದಲ್ಲಿ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸರ್ಕಾರ ತೀರ್ಮಾನಿಸಲಿದೆ