ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಿ: ಕುಮಾರಸ್ವಾಮಿ ಆಗ್ರಹ

Sampriya

ಶುಕ್ರವಾರ, 24 ಜನವರಿ 2025 (15:08 IST)
ಬೆಂಗಳೂರು: ಸದ್ಯ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಂಬಂಧ  ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ  ಕರ್ನಾಟಕದಲ್ಲಿ ಬಡ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್'ಗಳ ಹಾವಳಿಯನ್ನು ಕಾಂಗ್ರೆಸ್
 ಸರಕಾರ ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸಾಲ ಶೂಲದಿಂದ ಬಡ ಜನರನ್ನು ಪಾರು ಮಾಡಲು ಋಣಮುಕ್ತ ಕಾಯ್ದೆ ಜಾರಿ ಮಾಡಿದ್ದೆ. ಅದನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ.


ಕಾನೂನುಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲು ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು? ಸರಕಾರವೇ ಅನುಮತಿ ಕೊಟ್ಟಿದೆಯಾ? ರಾಷ್ಟ್ರೀಕೃತ & ಸಹಕಾರಿ ಬ್ಯಾಂಕುಗಳು ಸಮರ್ಪಕವಾಗಿ ಸಾಲ ಸೌಲಭ್ಯ ನೀಡಿದರೆ ಜನರು ಮೈಕ್ರೋ ಫೈನಾನ್ಸ್ ಬಳಿಗೆ ಯಾಕೆ ಹೋಗುತ್ತಾರೆ?

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ