ಎಸ್‌.ಎಂ.ಕೃಷ್ಣ ಯಾವ ಪಕ್ಷಕ್ಕೆ ಬೇಕಾದರು ಹೋಗಲಿ: ಸಚಿವ ರಮೇಶ್ ಕುಮಾರ್

ಶುಕ್ರವಾರ, 3 ಫೆಬ್ರವರಿ 2017 (12:49 IST)
ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಮುಗಿದ ಅಧ್ಯಾಯ. ಅವರು ಯಾವ ಪಕ್ಷಕ್ಕೆ ಬೇಕಾದರು ಹೋಗಲಿ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ. 
 
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಕಾಂಗ್ರೆಸ್ ತೊರೆದಿರುವುದು ಮುಗಿದ ಅಧ್ಯಯವಾಗಿದೆ. ಅವರ ಮನವೊಲಿಸಿ ಪಕ್ಷಕ್ಕೆ ಮರಳಿ ಕರೆತರುವ ಪ್ರಯತ್ನವನ್ನು ಸಹ ನಿಲ್ಲಿಸಲಾಗಿದೆ. ಅವರಿಗೆ ಬೇಕಾದ ಪಕ್ಷಕ್ಕೆ ಅವರು ಹೋಗಲಿ ಎಂದರು.   
 
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ಜನೆವರಿ 28ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು. 
 
ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರಾಗಿದ್ದ ಎಸ್.ಎಂ.ಕೃಷ್ಣ ಅವರ ಮನವೊಲಿಸಿ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಕಾಂಗ್ರೆಸ್ ಹೈಕಮಾಂಡ್ ನಡೆಸಿದ್ದ ಪ್ರಯತ್ನ ವಿಫಲವಾಗಿದೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ