ಮಾಜಿ ಸಿಎಂ ಎಸ್.ಎಂ.ಕೃಷ್ಣ ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾದ ಕೃಷ್ಣ ಇಂದು ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಬೇಡಿಕೆ ಅಥವಾ ಷರತ್ತುಗಳನ್ನಿಟ್ಟು ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ಮಗಳು, ಅಳಿಯನ ಭವಿಷ್ಯಕ್ಕಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.