ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣರ ಜೊತೆ ಮಾತನಾಡಲು ಕಾಲ ಕೂಡಿ ಬಂದಿಲ್ಲ. ಅವರು ಪಕ್ಷದಲ್ಲಿಯೇ ಮುಂದುವರೆಯಲಿ ಎಂದು ನಮ್ಮ ಆಸೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಡಿಕೆಯ ಸರಕಾರವಲ್ಲ. ಇದು ಕಂಚಿನ ಸರಕಾರ, ಹುಣಸೇ ಹಾಕಿ ಉಜ್ಜಿದಷ್ಟು ಹೊಳಪು ಬರುತ್ತದೆ ಎಂದು ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು.