ದಿನೇಶ್ ಗುಂಡೂರಾವ್ ಕುಟುಂಬದ ಭೂಕಬಳಿಕೆ: ರಾಜೀನಾಮೆಗೆ ಆಗ್ರಹ

ಸೋಮವಾರ, 28 ಏಪ್ರಿಲ್ 2014 (16:01 IST)
ಧಾರವಾಡ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹಾಗೂ ಅವರ ಕುಟುಂಬ 720 ಕೋಟಿ ಮೌಲ್ಯದ ಭೂ ಕಬಳಿಕೆಯನ್ನು ಮಾಡಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ. 47.16 ಎಕರೆ ಸಾರ್ವಜನಿಕ ಭೂಮಿಯನ್ನು ಕಬಳಿಕೆ ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು ಗುಂಡೂರಾವ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಎನ್‌ಸಿಪಿಎನ್‌ಆರ್, ಜನಸಂಗ್ರಾಮ ಪರಿಷತ್ ಮತ್ತು ಇತರ ಸಮಾನ ಹಿತಾಸಕ್ತಿಯ ಸಂಘಟನೆಗಳು ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಲಿದೆ ಎಂದು ತಿಳಿಸಿದರು.
 
550 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿಯ ಕಬಳಿಕೆಯಿಂದ ಸಂಪಾದಿಸಿದ ಹಣವನ್ನು ವಶಕ್ಕೆತೆಗೆದುಕೊಳ್ಳಲು ಕ್ರಮಕೈಗೊಳ್ಳುವಂತೆ ಅವರು ಮುಖ್ಯಮಂತ್ರಿಗೆ ಒತ್ತಾಯಿಸಿದರು. ಎ.ಟಿ. ರಾಮಸ್ವಾಮಿ ಸಮಿತಿ ವರದಿ ಪ್ರಕಾರ, ಯಲಹಂಕದ ಬೆಂಗಳೂರು ಉತ್ತರತಾಲೂಕು ನವರತ್ನ ಅಗ್ರಹಾರ ಗ್ರಾಮದಲ್ಲಿ 47. 16 ಎಕರೆ ಭೂಮಿಯನ್ನು ಕಬಳಿಕೆ ಮಾಡಲಾಗಿದೆ ಎಂದು ಹಿರೇಮಠ್ ಆರೋಪಿಸಿದರು.

ಗುಂಡೂರಾವ್ ರಾಜಕೀಯ ಪ್ರಭಾವದಿಂದ ತಹಸೀಲ್ದಾರ್ ಕಬಳಿಕೆ ಭೂಮಿಯನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಹಿರೇಮಠ್ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ