ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡ್ಬೇಕು : ನಿರ್ಮಲಾ ಸೀತಾರಾಮನ್

ಬುಧವಾರ, 26 ಏಪ್ರಿಲ್ 2023 (14:50 IST)
ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡಬೇಕಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದರು.
 
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ಜಿಸಲ್ಲೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದರು. ಬೆಳಗ್ಗೆ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ನಡೆಸಿ, ಬಳಿಕ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ಬಹಳ ಮಹತ್ವ ಪೂರ್ಣದ್ದಾಗಿದೆ. 2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಗುರಿ ನಮ್ಮದಿದೆ. ಮೋದಿ ಅವರ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅನ್ನೋ ಪರಿಕಲ್ಪನೆಯೊಂದಿಗೆ ಕೇಂದ್ರ ಸರ್ಕಾರ ಕೆಲಸ ಮಾಡ್ತಿದೆ. ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡಬೇಕಾಗಿದೆ ಎಂದು ಕರೆ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ