ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ

ಬುಧವಾರ, 7 ಜುಲೈ 2021 (14:14 IST)
ಕೇಂದ್ರ ಸಂಪುಟ ಪುನರಚನೆ ಖಚಿತವಾಗುತ್ತಿದ್ದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಗೆ ಡಿವಿ ಸದಾನಂದ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಪಕ್ಷದ ಹಿರಿಯ ಮುಖಂಡ ಸಭೆ ಬೆನ್ನಲ್ಲೇ ಸದಾನಂದ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಮೂವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಂತಾಗಿದೆ.
ಮಾನವ ಸಂಪನ್ಮೂಲ ಸಚಿವ ಸ್ಥಾನಕ್ಕೆ ಸರಬಾನಂದ ಸೋನುವಾಲ್ ಮತ್ತು ಕಾರ್ಮಿಕ ಖಾತೆಗೆ ಸಂತೋಷ್ ಗಂಗ್ವಾರ್ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ