ವಾಚ್, ಕನ್ನಡಕ ಎಂದು ಚಿಲ್ಲರೆ ವಿಚಾರದ ಚರ್ಚೆ ಬೇಡ: ಡಿವಿಎಸ್

ಗುರುವಾರ, 18 ಫೆಬ್ರವರಿ 2016 (21:40 IST)
ಕಳೆದ ಹದಿನೈದು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಪಕ್ಷಗಳ ಮಧ್ಯೆ ವಾಚ್ , ಕನ್ನಡಕ ಎನ್ನುವ ಚಿಲ್ಲರೆ ವಿಷಯದ ಬಗ್ಗೆ ಆರೋಪ ಪ್ರತ್ಯಾರೋಪ ನಡೆಯುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡ ಕಿವಿಮಾತು ಹೇಳಿದ್ದಾರೆ.
 
ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ಇರುವಾಗ ಅಡಳಿತ ಮತ್ತು ವಿಪಕ್ಷಗಳು ಚಿಲ್ಲರೆ ವಿಷಯದ ಬಗ್ಗೆ ಚರ್ಚಿಸುವುದು ಸರಿಯಲ್ಲ.ಜನತೆಯ ಸಮಸ್ಯೆಗಳನ್ನು ಪರಿಹರಿಸುವಂತಹ ವಿಷಯಗಳ ಬಗ್ಗೆ ಚರ್ಚಿಸುವುದು ಸೂಕ್ತ ಎಂದು ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ವಾಚ್, ಕನ್ನಡಕ ವಿಷಯವನ್ನು ಮರೆತುಬಿಡದೆ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.ವಿಪಕ್ಷಗಳ ತರಾಟೆಗೆ ಗ್ರಾಸವಾಗುತ್ತಿದ್ದಾರೆ. ಅವರು ತಮ್ಮ ಹುದ್ದೆಯ ಘನತೆ, ಗೌರವವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದರು.
 
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪ ಪಕ್ಷ ಅತಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು. 

ವೆಬ್ದುನಿಯಾವನ್ನು ಓದಿ