ಪರಿಶಿಷ್ಟ ಸಮುದಾಯದ ಜನರಿಗೆ ಅನುಕೂಲ ಮಾಡಿಕೊಡುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯ ಕೇಳಿಬಂದಿದೆ.
ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಪುರಭವನದ ಮುಂಭಾಗ ಜಮಾಯಿಸಿದ ಹೋರಾಟಗಾರರು, ಸಾಮಾಜಿಕ ನ್ಯಾಯ ದೊರಕಿಸಿ ಕೊಡಲು ನಡೆಸಿದ ಹೋರಾಟದ ಫಲವಾಗಿ ಸದಾಶಿವ ಆಯೋಗದ ವರದಿ ರಚನೆಯಾಗಿದೆ.
2004ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ನ್ಯಾ. ಎ.ಜೆ. ಸದಾಶಿವ ಆಯೋಗವನ್ನು ರಚನೆ ಮಾಡಿದೆ. ಸವಿಸ್ತಾರವಾಗಿ ಅಧ್ಯಯನ ನಡೆಸಿದ ಆಯೋಗವು 200 ಪುಟಗಳ ಸುದೀರ್ಘ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಮೂಲಕ ಪರಿಶಿಷ್ಟ ಜಾತಿಯ ಶೇ. 15ರ ಮೀಸಲಾತಿ ಪ್ರಮಾಣವನ್ನು ನಾಲ್ಕು ಭಾಗಗಳನ್ನಾಗಿ ವಿಂಗಡಿಸಿದೆ.
ಎಡಗೈ ಸಮುದಾಯಕ್ಕೆ ಶೇ. 6 ಮತ್ತು ಬಲಗೈ ಸಮುದಾಯಕ್ಕೆ ಶೇ. ೫ ಹಾಗೂ ಅಸ್ಪೃಶ್ಯರಲ್ಲದವರಿಗೆ ಶೇ. 3 ಹಾಗೂ ಇತರರಿಗೆ ಶೇ. 1 ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಈ ವರದಿಯಲ್ಲಿ ಯಾವುದೇ ಗೊಂದಲ ಇಲ್ಲ. ಈ ಕೂಡಲೇ ಜಾರಿಗೆ ತನ್ನಿ ಎಂದು ಆಗ್ರಹಿಸಿದರು.