ಸಿಎಂ ಅವರಿಂದ ಸಾಹಿತ್ಯ ಪರಿಷತ್ತಿಗೆ ಅಗೌರವ

geetha

ಶನಿವಾರ, 13 ಜನವರಿ 2024 (19:00 IST)
ಬೆಂಗಳೂರು : ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನವನ್ನು ಬರದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಆದರೆ 2024 ರಲ್ಲಿ ಸಮ್ಮೇಳನ ನಡೆಯಲೇಬೇಕಿದೆ ಎಂದಿರುವ ಮಹೇಶ್‌ ಜೋಷಿ, ಸರ್ಕಾರದ ಬಳಿ 25 ಕೋಟಿ ರೂ. ಅನುದಾನಕ್ಕೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.  ಜೊತೆಗೆ, ಕನ್ನಡ ನಾಮಫಲಕ ವಿಚಾರದಲ್ಲಿ ಈ ಹಿಂದೆ ಕಸಾಪ ಕೂಡ ಹೋರಾಟದಲ್ಲಿ ಭಾಗಿಯಾಗಿತ್ತು. ಕನ್ನಡದ ಶಾಲೆಗಳಿಗೆ ಮೂಲಭೂತ ಸೌಕರ್ಯ ಹಾಗೂ ನ್ಯಾಯಾಲಯದಲ್ಲಿ ಕನ್ನಡದಲ್ಲಿ ತೀರ್ಪು ಪ್ರಕಟಿಸುವ ನಿರ್ಣಯದ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಹೇಳಿದರು. 

ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿಗೆ ಅಗೌರವ ತೋರಿಸುತ್ತಿದ್ದಾರೆ ಎಂದು ಕಸಾಪ ಅಧ್ಯಕ್ಷ ನಾಡೋಜ ಮಹೇಶ್‌ ಜೋಷಿ ಗಂಭೀರ ಆರೋಪವೆಸಗಿದ್ದಾರೆ. ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿರುವ ನನಗೆ ಸಿಎಂ ಆಮಂತ್ರಣ ನೀಡಿಲ್ಲ ಎಂದು ಆಪಾದಿಸಿದ್ದಾರೆ. ಸಿಎಂ ಹಳೆ ಮೈಸೂರಿನವರು. ಈ ಹಿಂದೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರೂ ಆಗಿದ್ದರು ಎಂದು ಹೇಳಿರುವ ಮಹೇಶ್‌ ಜೋಷಿ,  ಆದರೆ ಈಗ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎನಿಸುತ್ತಿದೆ ಎಂದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ