ರಾಜ್ಯ ರಾಜಕಾರಣದಲ್ಲಿ ‘ಸಾಹುಕಾರ್’ ಆ್ಯಕ್ಟೀವ್
ರಾಜ್ಯ ರಾಜಕಾರಣದಲ್ಲಿ ಗೋಕಾಕ್ ಸಾಹುಕಾರ್ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಲೋಕಸಮರದ ಹಿನ್ನೆಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಪ್ತ ಸಭೆ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಂತಿಮ ಹಂತದ ಚರ್ಚೆಯಾಗಿದ್ದು, ಕಮಲ-ದಳ ಮೈತ್ರಿ ಮೂಲಕ ಕಾಂಗ್ರೆಸ್ ಸೋಲಿಗೆ ಸಾಹುಕಾರ್ ರಣತಂತ್ರ ಹೆಣೆಯುತ್ತಿದ್ದಾರೆ. ಆಪ್ತ ಬಳಗವನ್ನು ಚುನಾವಣೆಗೆ ಸಜ್ಜುಗೊಳಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ. ಈಗಾಗಲೇ ಬೆಂಗಳೂರು ಗ್ರಾಮಾಂತರದಲ್ಲಿ ಗೆಳೆಯ ಮಾಜಿ ಸಚಿವ CP ಯೋಗೇಶ್ವರ್ ಟಿಕೆಟ್ ಕುರಿತಂತೆ ಮಾಜಿ ಸಿಎಂ H.D.ಕುಮಾರಸ್ವಾಮಿ ಜೊತೆಗೆ ಮಾತುಕತೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.K.ಸುಧಾಕರ್ ಸ್ಫರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಸುಧಾಕರ್ ಸ್ಫರ್ಧೆ ಬಗ್ಗೆ ಕೂಡ ಕುಮಾರಸ್ವಾಮಿ ಜೊತೆಗೆ ಸಾಹುಕಾರ್ ಮಾತುಕತೆ ನಡೆಸಿದ್ದಾರೆ. ನಿನ್ನೆ ಸುಧಾಕರ್ ಭೇಟಿ ಮಾಡಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.. ದೆಹಲಿ ನಾಯಕರ ಭೇಟಿ ವೇಳೆ ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಕುರಿತು ಚರ್ಚೆ ಮಾಡುವ ಸಾಧ್ಯತೆಯಿದೆ.