ನೌಕರರ ವೇತನ ಪರಿಷ್ಕರಣೆ : ಸುಧಾಕರ್

ಶುಕ್ರವಾರ, 8 ಜುಲೈ 2022 (08:55 IST)
ಬೆಂಗಳೂರು : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.

ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸುಧಾಕರ್, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು.

ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು. 

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಖಾಯಂ ನೌಕರರಿಗೆ ಕೊಡುವಷ್ಟೇ ವೇತನವನ್ನು ನಮಗೂ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ 49 ಕಾರ್ಯಕ್ರಮಗಳನ್ನು ನಿರ್ದಿಷ್ಟ ಸಮಯದ ತನಕ ಮಾಡಲಿದೆ.

ಹೀಗಾಗಿ ಅವರನ್ನು ಖಾಯಂ ನೌಕರರನ್ನಾಗಿ ಮಾಡಿಕೊಳ್ಳಲು ಅಡಚಣೆಗಳಿವೆ. ಅಷ್ಟೇ ಅಲ್ಲದೆ, ಖಾಯಂ ನೌಕರರಂತೆ ಸಮಾನ ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ಆದರೆ ಈಗಿರುವ ವೇತನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಆರೋಗ್ಯ ವಿಮೆ ವಿಸ್ತರಣೆ, 10 ದಿನಗಳ ವೇತನ ಸಹಿತ ರಜೆಯ ಬೇಡಿಕೆಗಳನ್ನು ಇಟ್ಟಿದ್ದಾರೆ. ಇದಕ್ಕೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ