ಕೆಜಿಹಳ್ಳಿಯ ಹೆಚ್ಬಿಆರ್ ಲೇಔಟ್ ನಿವಾಸಿ ಆರ್ಯನ್ ಖಾನ್ ಬಂಧಿತ ಆರೋಪಿ. ಬಂಧಿತನಿಂದ ಆನೆ ಕಾಲಿನ ಪಾದ, ತಾಮ್ರದ ಪ್ಲೇಟ್, ಒಂದು ಮಿಲ್ಕ್ ಜಗ್, ಒಂದು ಟೀ ಪಾಟ್, ಒಂದು ಮಗರ್ ಸ್ಟೇಯರ್, ಭೂತಾನ್ ಶೋ ಪೀಸ್, ಐರೀಷ್ ಟೀ ಮೇಕರ್, ಶುಗರ್ ಪಾಟ್, ಸ್ಮಾಲ್ ಮಿಲ್ಕ್ ಜಗ್, ಒಂದು ಜರ್ಮನ್ ಸಿಲ್ವರ್ ಸೌಟು, ಎರಡು ಜರ್ಮನ್ ಸಿಲ್ವರ್ ಆಶ್ ಟ್ರೇ, 5 ಚಿಕ್ಕ ಮಸ್ಟರ್ಡ್ ಟ್ರೇ, ಎರಡು ಚಿಕ್ಕ ಮಂಚಗಳು, ಎರಡು ಆಫ್ರಿಕನ್ ಆರ್ಟ್‌ವುಡ್ ಸ್ಪೂನ್, ಪ್ರಾಣಿಯ ಮೂಳೆಯಿಂದ ಮಾಡಿದ ಸ್ಪೂನ್, ಎರಡು ಜರ್ಮನ್ ಸಿಲ್ವರ್ ಫೋರ್ಕ್, ಟೇಬಲ್ ನೈಫ್ ಶಾರ್ಪ್‌ನರ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಕಾನೂನು ಪ್ರಕಾರ ವನ್ಯಜೀವಿಗೆ ಸಂಬಂಧಿಸಿ ವಸ್ತುಗಳನ್ನು ಇಟ್ಟುಕೊಳ್ಳಬೇಕಾದರೆ ಅರಣ್ಯ ಇಲಾಖೆಯಿಂದ ಪ್ರಮಾಣಪತ್ರ ಪಡೆಯಬೇಕಾಗುತ್ತದೆ. ಜೊತೆಗೆ ಇನ್ನೊಬ್ಬರಿಗೆ ಮಾರಾಟ ಮಾಡಬೇಕಾದರೂ ದಾಖಲಾತಿ ಮಾಡಿಸಿಕೊಳ್ಳಬೇಕಿದೆ.ಆದರೆ, ಆರೋಪಿಯು ಯಾವುದೇ ರೀತಿಯ ನಿಯಮಗಳನ್ನ ಪಾಲಿಸದೆ ಅಕ್ರಮವಾಗಿ ಕೋಟ್ಯಂತರ ಹಣಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.