ನೆರೆ ಸಂತ್ರಸ್ತರಿಗೆ ವ್ಯವಸ್ಥೆ - ಸಿಎಂ ಸೂಚನೆ
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಪ್ರಕೃತಿ ವಿಕೋಪ ವೇಳೆ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು SDRF ತಂಡಗಳನ್ನು ರಚಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದು, ಪರಿಹಾರ ಕಾರ್ಯಕ್ರಮಗಳನ್ನು ಬೇಗ ನಡೆಸುವಂತೆ ಹೇಳಿದ್ದಾರೆ .