ಕೊರೊನಾ ವೈರಸ್ ತಡೆಗೆ ಹೋರಾಟ ನಡೆಸುತ್ತಿರುವವರಿಗೆ ವಿಭಿನ್ನ ರೀತಿಯಲ್ಲಿ ಗೌರವ ಸಲ್ಲಿಸಲಾಗುತ್ತಿದೆ.
ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಸಲುವಾಗಿ ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ವೀಕ್ಷಿಸಿದರು.
ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆರು, ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕಿತರು ಹಾಗೂ ಪ್ರಾಥಮಿಕ ಹಂತದ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೊರೆದು ಕೋವಿಡ್-19 ರೋಗಿಗಳ ಚಿಕಿತ್ಸೆ ಮಾಡುತ್ತಿದ್ದಾರೆ ಎಂದರು.
ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಅವರು ಮರಳು ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಹೇಳಿದರು.