ಮರಳು ಲಾರಿ ಡಿಕ್ಕಿ; ಶಾಲಾ ಬಾಲಕಿ ಸ್ಥಳದಲ್ಲೇ ಸಾವು

ಸೋಮವಾರ, 9 ಮಾರ್ಚ್ 2020 (11:24 IST)
ದಾವಣಗೆರೆ : ಮರಳು ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿಯಲ್ಲಿ ನಡೆದಿದೆ.


ದಿವ್ಯಾ ಪಾಟಿಲ್(14) ಸಾವನಪ್ಪಿದ ಬಾಲಕಿ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಸ್ಥಳಕ್ಕೆ ನ್ಯಾಮತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶಲನೆ ನಡೆಸುತ್ತಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ