ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ನಂಟು ಪ್ರಕರಣ; ಶಾಸಕ ಜಮೀರ್ ವಿರುದ್ಧ ಗಂಭೀರ ಆರೋಪ ಮಾಡಿದ ಸಂಬರಗಿ

ಶುಕ್ರವಾರ, 11 ಸೆಪ್ಟಂಬರ್ 2020 (12:31 IST)
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.   

ಈ ಹಿಂದೆ ಸ್ಯಾಂಡಲ್ ವುಡ್ ಸ್ಟಾರ್ ಗಳಿಗೆ ಡ್ರಗ್ಸ್ ಮಾಫಿಯಾ ನಂಟು ಇದೆ ಆರೋಪಿಸಿದ್ದ ಸಂಬರಗಿ ಇದೀಗ ಶಾಸಕ ಜಮೀರ್ ಅಹ್ಮದ್, ನಟಿ ಸಂಜನಾ ಜೊತೆ ಶ್ರೀಲಂಕಾಕ್ಕೆ ಹೋಗಿದ್ದಾರೆ. ಅದರ ಬಗ್ಗೆ ನನ್ನ ಬಳಿ ದಾಖಲೆಗಳಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಾಂತ್ ಸಂಬರಗಿ ನೇರ ಆರೋಪ ಮಾಡಿದ್ದಾರೆ.

ಪ್ರಶಾಂತ್ ಸಂಬರಗಿ ಆರೋಪದ ಆಧಾರದ ಮೇಲೆ ಸಿಸಿಬಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ