ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಕೆಲವು ನಟ ನಟಿಯರ ಹೆಸರು ಕೇಳಿಬಂದಿದೆ- ಬಸವರಾಜ ಬೊಮ್ಮಾಯಿ

ಗುರುವಾರ, 3 ಸೆಪ್ಟಂಬರ್ 2020 (13:33 IST)
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ದಂಧೆಯಲ್ಲಿ ಕೆಲವು ನಟ ನಟಿಯರ ಹೆಸರು ಕೇಳಿಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಈಗಾಗಲೇ ಕೆಲವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ಸ್ ಜಾಲದ ಬಗ್ಗೆಯೇ ತನಿಖೆ ನಡೆಯುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಎಸ್ ಐಟಿ ರಚನೆ ಅಗತ್ಯತೆ ಇಲ್ಲ. ಸಿಸಿಬಿಯಿಂದಲೇ ಎಲ್ಲವನ್ನೂ ತನಿಖೆ ಮಾಡಿಸುತ್ತೇವೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ