ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶವನ್ನು ಸಂಗೊಳ್ಳಿ ರಾಯಣ ಬ್ರಿಗೇಡ್ ಹೊಂದಿತ್ತು. ಆದರೆ, ಇದೀಗ ಬ್ರಿಗೇಡ್‌ನ ಉದ್ದೇಶ ಬದಲಾಗಿದ್ದು, ಕೇವಲ ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಬ್ರಿಗೇಡ್‌ಗೆ ದಲಿತರು ಹಾಗೂ ಹಿಂದುಳಿದ ವರ್ಗದ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬ್ರಿಗೇಡ್‌ನ ಅವಶ್ಯಕತೆ ಇಲ್ಲ ಎಂದು ಬಿಎಸ್‌ವೈ ಅಭಿಪ್ರಾಯ ಪಟ್ಟ ಹಿನ್ನೆಲೆಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಉದ್ದೇಶ ಬದಲಾಗಿದೆ ವಿವರಣೆ ನೀಡಿದರು.
ಆದರೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗೂ ಈ ಇಬ್ಬರ ನಾಯಕರ ನಡುವೆ ತೆರೆಮರೆಯ ಗುದ್ದಾಟಗಳು ನಡೆದಿದ್ದವು. ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.