ಕಿಮ್ಸ್ ಆಸ್ಪತ್ರೆಗೆ ಸಂತೋಷ್ ಲಾಡ್ ಭೇಟಿ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಸಚಿವ ಹಾಗೂ ಹುಬ್ಬಳ್ಳಿ- ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಂತೋಷ್ ಲಾಡ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು, ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಲ್ಲದೇ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ,ಕುಂದು ಕೊರತೆ ವಿಚಾರಿಸಿದರು. ಕಿಮ್ಸ್ ಆಸ್ಪತ್ರೆ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯಬೇಕು ಔಷಧಗಳ ಸಮಸ್ಯೆ ಆಗಬಾರದು. ರೋಗಿಗಳ ಬಗ್ಗೆ ನಿರ್ಲಕ್ಷ್ಯ ತೋರಿದರೆ ಅಂತಹ ವೈದ್ಯರು ಹಾಗೂ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.