ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ.ಈಗಾಗಲೇ ಸ್ಯಾಂಟ್ರೋ ರವಿ ಆಪ್ತರ ವಿಚಾರಣೆ ನಡೆದಿದೆ. ಶೀಘ್ರದಲ್ಲೇ ಸ್ಯಾಂಟ್ರೋ ರವಿಯನ್ನೂ ಕೂಡ ಬಂಧಿಸಲಾಗುತ್ತದೆ ಎಂದು ಹೇಳಿದರು.