ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಪ್ರೇರಣಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತಂತೆ ಸ್ವತಃ ಧ್ರುವ ಅವರೇ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ
ಅದ್ಧೂರಿ' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ಧ್ರುವ ಸರ್ಜಾ, ಸದ್ಯ ಮಾರ್ಟಿನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪೊಗರು ಸಿನಿಮಾ ಬಳಿಕ ಎಚ್ಚರಿಕೆ ಹೆಜ್ಜೆ ಇಡುತ್ತಿರೋ ಧ್ರುವ, ನಿರ್ದೇಶಕ ಪ್ರೇಮ್ ಅವರೊಂದಿಗೆ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
2019ರ ನವೆಂಬರ್ನಲ್ಲಿ ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ ಸಪ್ತಪದಿ ತುಳಿದಿದ್ದರು. ಈಗ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಈ ದಂಪತಿ