ಪ್ರಕರಣದ ತನಿಖೆಯನ್ನು ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್. ಗೀತಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಎಸ್ ಸಿ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣದ ತನಿಖೆಯನ್ನು 30 ದಿನಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು. ತಪ್ಪಿದರೆ ಮುಂದಿನ ವಿಚಾರಣೆಗೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗಬೇಕು ಎಂದು 2021ರ ಸೆ.7ರಂದು ಹೈಕೋರ್ಟ್ ತಾಕೀತು ಮಾಡಿತ್ತು. ಅದರಂತೆ ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲ ವಿ.ಶ್ರೀನಿಧಿ ಹಾಜರಾಗಿ, ಇಂದಿನ ವಿಚಾರಣೆಗೆ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಹಾಜರಾಗಬೇಕಿತ್ತು. ಆದರೆ, ವೈಯಕ್ತಿಕ ಕಾರಣದಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಪೀಠಕ್ಕೆ ತಿಳಿಸಿದರು.