ಹಾಡಹಗಲೇ ಎಟಿಎಂ ಲೂಟಿ: 18 ಲಕ್ಷ ಹೊತ್ತೊಯ್ದ ಕಳ್ಳರು
ಹುಬ್ಬಳ್ಳಿ: ಹಾಡಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂ ಮಷಿನ್ ಕಟ್ ಮಾಡಿ 18 ಲಕ್ಷ ರೂ. ಹಣ ದೋಚಿರುವ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ.
ಜನರು ಓಡಾಡುವ ಸ್ಥಳದಲ್ಲಿಯೇ ಕಳ್ಳರು ತಮ್ಮ ಕೈಚಳಕ ತೋರಿಸಿ 18 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.