ಕಾವೇರಿ ತೀರ್ಪು ಕಾಯ್ದಿರಿಸಿದ ಸುಪ್ರೀಂ: ಯಥಾಸ್ಥಿತಿ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ....

ಬುಧವಾರ, 19 ಅಕ್ಟೋಬರ್ 2016 (16:41 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ಕಾಯ್ದಿರಿಸಿರುವ ನ್ಯಾಯಾಲಯ, ಮುಂದಿನ ಆದೇಶದವರೆಗೂ ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುಂತೆ ಸೂಚನೆ ನೀಡಿದೆ. 
ನಾಲ್ಕು ರಾಜ್ಯಗಳು ಮಂಡಿಸಿರುವ ವಾದ ಆಲಿಸಿದ ಸುಪ್ರೀಂಕೋರ್ಟ್, 2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆಯ ತೀರ್ಪು ಕಾಯ್ದಿರಿಸಿದೆ. 
 
ಮುಂದಿನ ಆದೇಶ ನೀಡುವವರೆಗೂ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಅಜಯ್ ಎಂ, ಖಾನ್ವಿಲ್ಕರ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಕರ್ನಾಟಕ ಸರಕಾರಕ್ಕೆ ಸೂಚನೆ ನೀಡಿದೆ. 
 
2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ