SC/ST,PTCL ಕಾಯ್ದೆ ಭೂಮಿ ವಂಚಿತರ ಹೋರಾಟ

ಶನಿವಾರ, 1 ಜುಲೈ 2023 (17:55 IST)
PTCL ಕಾಯ್ದೆ ತಿದ್ದುಪಡಿಗೆ  ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 180ನೇ ದಿನಕ್ಕೆ ಕಾಲಿಟ್ಟಿದೆ. SC/ST,PTCL ಕಾಯ್ದೆ ಭೂಮಿ ವಂಚಿತರು ನಡೆಯುತ್ತಿರುವ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದ ಕಾಲದಿಂದಲೂ ಈ ಕಾಯ್ದೆ ಸುಧಾರಣೆಗೆ ಹೋರಾಟ ನಡೀತಿತ್ತು, ಬಿಜೆಪಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ರೂ ಪ್ರಯೋಜನವಾಗಿಲ್ಲ ಅಂತಾ ಪ್ರತಿಭಟನಾಕಾರರು ಆರೋಪಿಸಿದ್ದಾರೆ.ಇನ್ನು ಚುನಾವಣೆ ವೇಳೆ ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ನಮ್ಮ ಸರ್ಕಾರ ಬಂದ್ರೆ ಬೇಡಿಕೆ ಈಡೇರಿಸುವಂತೆ ಭರವಸೆ ನೀಡಿದ್ರು, ಆದ್ರೆ 3 ಬಾರಿ ಕ್ಯಾಬಿನೆಟ್ ಮೀಟಿಂಗ್ ನಡೆದಿದ್ರೂ ಸರ್ಕಾರ ಸ್ಪಂದಿಸದ ಹಿನ್ನೆಲೆ ಇವತ್ತು ಸಂವಿಧಾನ ಸಂರಕ್ಷಣಾ ಒಕ್ಕೂಟ, ಭೀಮ ಆರ್ಮಿ,ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳು ಫ್ರೀಡಂ ಪಾರ್ಕ್ ನಲ್ಲಿ ಸಭೆ ಸೇರಿದ್ದಾರೆ. ಹಾಡು ಹಾಡೋ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿರೋ ಹೋರಾಟಗಾರರು, ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ರೆ ವಿಧಾನಸೌಧ ಹಾಗೂ ಸಿಎಂ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸೋ ಎಚ್ಚರಿಕೆಯನ್ನ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ