ಸುಪ್ರೀಂಕೋರ್ಟ್‌ನಲ್ಲಿ ಇಂದು ಕಾವೇರಿ ಅರ್ಜಿ ವಿಚಾರಣೆ

ಸೋಮವಾರ, 24 ಅಕ್ಟೋಬರ್ 2016 (11:36 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ, ತಮಿಳುನಾಡು ಸೇರಿದಂತೆ ಮೂರು ರಾಜ್ಯಗಳು ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ಇಂದು ಮತ್ತೆ ವಿಚಾರಣೆಗೆ ಬರಲಿದೆ. 
ಅಕ್ಟೋಬರ್ 24ರವರೆಗೂ ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ಸುಪ್ರೀಂಕೋರ್ಟ್ ಕರ್ನಾಟಕ ಸರಕಾರಕ್ಕೆ ಸೂಚನೆ ನೀಡಿತ್ತು. ಕೇಂದ್ರ ತಂಡದ ಅಧ್ಯಯನ ವರದಿ ಸಲ್ಲಿಕೆ ಬಳಿಕ ತಮಿಳುನಾಡು ಸಲ್ಲಿಸಿದ ಮಧ್ಯಂತರ ಅರ್ಜಿ ವಿಚಾರಣೆ ಮುಂದುವರಿಸಿದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ ಈ ಆದೇಶ ನೀಡಿತ್ತು. 
 
ಮೇಲ್ಮನವಿ ಅರ್ಜಿಗಳು ವಿಚಾರಣೆ ಅರ್ಹವೇ ಎನ್ನುವುದರ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿಯ ಸಿಂಧುತ್ವದ ತೀರ್ಪನ್ನು ಕಾಯ್ದಿರಿಸಿತ್ತು. ಮೇಲ್ಮನವಿ ಅರ್ಜಿಗಳ ಸಿಂಧುತ್ವದ ತೀರ್ಪು ಇಂದು ಹೊರಬೀಳಲಿದೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ