ಬೆಂಗಳೂರು: ರಾಜ್ಯವಿಧಾನಸಭೆ ಸ್ಪೀಕರ್ ಕೋಳಿವಾಡ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ತಮ್ಮ ಮಕ್ಕಳಿಗೆ ಅಕ್ರಮವಾಗಿ ನಿವೇಶನ ಹಂಚಿದ್ದಾರೆಂದು ಅವರ ಮೇಲೆ ಆರೋಪ ಬಂದಿದೆ.
ಯಲಹಂಕ ಗಸ್ತಿ ಕೆಂಪನಹಳ್ಳಿ ಅಗ್ರಹಾರದಲ್ಲಿ ತಮ್ಮ ನಾಲ್ವರು ಹೆಣ್ಣು ಮಕ್ಕಳಿಗೆ ಅಕ್ರಮವಾಗಿ ಆಸ್ತಿ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. 100 x 100 ನಿವೇಶನವನ್ನು ತಾವೇ ಖುದ್ದಾಗಿ ನೋಂದಣಿ ಮಾಡಿಸಿಕೊಟ್ಟಿದ್ದಾರೆ ಎಂದು ದೂರಲಾಗಿದೆ.
ಆ ನಿವೇಶನ ವಿವಾದಲ್ಲಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಹಾಗಿರುವಾಗ ಕೋಳಿವಾಡ ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಇದನ್ನು ಮಕ್ಕಳಿಗೆ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸ್ಪೀಕರ್ ಪ್ರತಿಕ್ರಿಯೆ ಏನೆಂದು ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ