ಮೈಸೂರು : ಶಾಲೆಗಳು ಬಂದ್ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
1 ರಿಂದ 9ನೇ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ನೀಡಲಾಗಿದೆ. ಅದರಂತೆ, ಮೈಸೂರಿನ ಜಿಲ್ಲಾದ್ಯಂತ 1 ರಿಂದ 9ನೇ ತರಗತಿ ಶಾಲೆ ಬಂದ್ ಮಾಡಿ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ. ಕೊರೊನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದರು.
ಅಲ್ಲಿನ ಅವಶ್ಯಕತೆಗಳಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಮಾಡಲ್ಲ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದರು.
ಒಂದು ವಾರದಲ್ಲಿ ರಾಜ್ಯದಲ್ಲಿ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. 1 ರಿಂದ 10 ನೇ ತರಗತಿಯ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದರು.